
ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 2,536 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 7 ಕೊನೆಯ ದಿನಾಂಕವಾಗಿದ್ದು, ದ್ವಿತೀಯ ಪಿಯುಸಿ ಉತ್ತೀರ್ಣರಾದ 18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 100 ರೂಪಾಯಿ ಶುಲ್ಕ ಪಾವತಿಸಬೇಕಿದ್ದು, ಮಹಿಳೆಯರು ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.