
ಕೇಂದ್ರದಿಂದ ಇಂಧನ ಬೆಲೆ ಏರಿಕೆ ಹಾಗೂ ನಿಗಮಗಳ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಪ್ರಯಾಣ ದರ ಪರಿಷ್ಕರಿಸುವುದು ಅನಿವಾರ್ಯ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ನವೆಂಬರ್ 3ರಂದು ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದ್ದು, ನವೆಂಬರ್ 4ರಂದು ದರ ಹೆಚ್ಚಳದ ಬಗ್ಗೆ ಅಂತಿಮ ಅಧಿಕೃತ ನಿರ್ಧಾರ ಪ್ರಕಟವಾಗಲಿದೆ.
ಕೆಎಸ್‌ಆರ್‌ಟಿಸಿ ಸೇರಿದಂತೆ ಮೂರು ನಿಗಮಗಳ ದರವನ್ನು ಶೇ. 25ರಷ್ಟು ಹಾಗೂ ಬಿಎಂಟಿಸಿ ದರವನ್ನು ಶೇ. 40ರಷ್ಟು ಹೆಚ್ಚಿಸಲು ಸಮಿತಿ ಶಿಫಾರಸು ಮಾಡಿದೆ.