
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಸಂಸ್ಥೆಯು 24 ಸಹಾಯಕ ವ್ಯವಸ್ಥಾಪಕ (ಮೆಕ್ಯಾನಿಕಲ್) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.
ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಆಗಸ್ಟ್ 17ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಗರಿಷ್ಠ ವಯೋಮಿತಿ 32 ವರ್ಷ ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 600 ರೂ. ಹಾಗೂ ಇಡಬ್ಲ್ಯೂಎಸ್, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.