
ಕನ್ನಡದಲ್ಲಿ ‘ಉಪೇಂದ್ರ’ ಹಾಗೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಬಾಲಿವುಡ್ ನಟಿ ರವೀನಾ ಟಂಡನ್, ಶಿವರಾಜ್ ಕುಮಾರ್ ಅಭಿನಯದ ಎಂಜಿ ಶ್ರೀನಿವಾಸ್ ನಿರ್ದೇಶನದ ‘ಎ ಫಾರ್ ಆನಂದ್’ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ.
ಬೆಂಗಳೂರಿನ ಪ್ರೆಸಿಡೆನ್ಸಿ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ವಿಶೇಷ ಪೂಜೆಯೊಂದಿಗೆ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ರವೀನಾ ಅವರು ಮೊದಲ ದಿನವೇ ಸೆಟ್‌ಗೆ ಆಗಮಿಸಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿ ಗೀತಾ ಶಿವರಾಜ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ.