
ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಸೇಂಟ್ ಲೂಯಿ ರ್‍ಯಾಪಿಡ್ ಮತ್ತು ಬ್ಲಿಟ್ಝ್ ಟೂರ್ನಿಯಲ್ಲಿ 23.5 ಪಾಯಿಂಟ್ಸ್ ಗಳಿಸಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
20 ವರ್ಷದ ಪ್ರಜ್ಞಾನಂದ ಅವರು ಬ್ಲಿಟ್ಝ್‌ನ 18 ಪಂದ್ಯಗಳಲ್ಲಿ 11.5 ಪಾಯಿಂಟ್ಸ್ ಕಲೆಹಾಕಿದ್ದು, ಉಜ್ಬೇಕಿಸ್ತಾನದ ಜಾವೊಖಿರ್ ಸಿಂದರೋವ್ 22 ಪಾಯಿಂಟ್ಸ್‌ನೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ.
ಈ ಗೆಲುವಿನೊಂದಿಗೆ ಪ್ರಜ್ಞಾನಂದ ಗ್ರ್ಯಾಂಡ್ ಚೆಸ್ ಟೂರ್ನಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಗ್ರ್ಯಾಂಡ್ ಫಿನಾಲೆಗೆ ಅರ್ಹತೆ ಖಚಿತಪಡಿಸಿಕೊಂಡಿದ್ದಾರೆ.