
ಭಾರತವನ್ನು ಡಿಸೆಂಬರ್ 31, 2029ರೊಳಗೆ ಸಂಪೂರ್ಣ ಮಾದಕ ವಸ್ತು ಮುಕ್ತ ದೇಶವನ್ನಾಗಿ ರೂಪಿಸುವ ದೃಢ ಸಂಕಲ್ಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ್ದಾರೆ.
ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆದ ಪೊಲೀಸ್ ಸ್ಮರಣಾರ್ಥ ದಿನದಂದು ಅವರು ಈ ಘೋಷಣೆ ಮಾಡಿದ್ದು, ಮಾದಕ ಜಾಲದ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ರಾಜ್ಯ ಪೊಲೀಸ್ ಪಡೆಗಳಿಗೆ ಕರೆ ನೀಡಿದರು.
ಮುಂದಿನ ಮೂರೂವರೆ ವರ್ಷಗಳಲ್ಲಿ ಇದನ್ನು ಸಂಪೂರ್ಣವಾಗಿ ಮಟ್ಟಹಾಕಲು ಗೃಹ ಸಚಿವಾಲಯ ಕಾರ್ಯತಂತ್ರ ರೂಪಿಸಿದೆ ಎಂದು ಅವರು ತಿಳಿಸಿದರು.