International
ಶಿಕ್ಷಣ ಅನುದಾನ ಹಾಗೂ ವಸತಿಗಾಗಿ ಯುರೋಪ್ ದೇಶಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಶಿಕ್ಷಣ ಅನುದಾನ ಹಾಗೂ ವಸತಿಗಾಗಿ ಯುರೋಪ್ ದೇಶಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

prajavani1h
THE BRIEF
1

ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಬೇಕು ಮತ್ತು ವಿದ್ಯಾರ್ಥಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಯುರೋಪ್‌ನ ಹಲವು ದೇಶಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮರುಕಳಿಸಿದೆ.

2

ಫ್ರಾನ್ಸ್, ಜರ್ಮನಿ ಮತ್ತು ಪೋರ್ಚುಗಲ್ ದೇಶಗಳಲ್ಲಿ ಶನಿವಾರ ಹಾಗೂ ಭಾನುವಾರ ನಡೆದ ಪ್ರತಿಭಟನೆ ವೇಳೆ, ಪ್ಯಾರಿಸ್‌ನಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ಕಾರಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಜರ್ಮನಿಯಲ್ಲಿ ಅಂಗಡಿಗಳನ್ನು ಲೂಟಿ ಮಾಡಲಾಗಿದೆ.

3

ಶರತ್ಕಾಲದ ರಜೆಗಳು ಮುಗಿದು ಸೋಮವಾರದಿಂದ ಹೈಸ್ಕೂಲ್‌ಗಳು ಪುನಃ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ, ಈ ಪ್ರತಿಭಟನೆಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.