
ಭಾರತ ತಂಡದ 35 ವರ್ಷದ ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಇಂಗ್ಲೆಂಡ್ನ ಡರ್ಹಾಮ್ ಕ್ರಿಕೆಟ್ ಕ್ಲಬ್ ಪರ ಕೌಂಟಿ ಚಾಂಪಿಯನ್ಶಿಪ್ನ ಉಳಿದ ಪಂದ್ಯಗಳಲ್ಲಿ ಆಡಲು ಒಪ್ಪಂದ ಮಾಡಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ ಡೇವಿಡ್ ಬೆಡಿಂಗ್ಹ್ಯಾಮ್ ತವರಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಅವರ ಬದಲಿಗೆ ಮಯಾಂಕ್ ಅಗರ್ವಾಲ್ ಅವರಿಗೆ ಈ ಅವಕಾಶ ಲಭಿಸಿದೆ.
ಟೀಂ ಇಂಡಿಯಾ ಪರ 21 ಟೆಸ್ಟ್ ಪಂದ್ಯಗಳಲ್ಲಿ 1,488 ರನ್ ಗಳಿಸಿರುವ ಮಯಾಂಕ್, ಇತ್ತೀಚಿನ ರಣಜಿ ಟ್ರೋಫಿಯಲ್ಲಿ ಕರ್ನಾಟಕ ಪರ 678 ರನ್ ಕಲೆಹಾಕಿದ್ದಾರೆ.