
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ದಿ ಇಂಡಿಯನ್ ಎಕ್ಸ್&zwnjಪ್ರೆಸ್ ಪ್ರಕಟಿಸಿದ ತನಿಖಾ ವರದಿಯನ್ನು ಉಲ್ಲೇಖಿಸಿ ಕಾಕ್&zwnjರೋಚ್ ಜನತಾ ಪಾರ್ಟಿಯ ಸೌರವ್ ದಾಸ್ ಗಂಭೀರ ಆರೋಪ ಮಾಡಿದ್ದಾರೆ.
ಕಳೆದ 10 ತಿಂಗಳಲ್ಲಿ ಇಬ್ಬರು ಚುನಾವಣಾ ಆಯುಕ್ತರು ಕನಿಷ್ಠ 14 ಬಾರಿ ಆಯೋಗದ ನಿರ್ಧಾರಗಳು ಹಾಗೂ ಆದೇಶಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.
ಆರೋಪಗಳನ್ನು ತಳ್ಳಿಹಾಕಿರುವ ಚುನಾವಣಾ ಆಯೋಗ, SIR ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ಮೂವರು ಆಯುಕ್ತರ ಸಮ್ಮತಿಯೊಂದಿಗೆ ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.