
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ಡಿಜೆ ಬಳಕೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಧರಣಿ ನಡೆಸಿದ್ದರಿಂದ ಮೈಸೂರು-ಚನ್ನರಾಯಪಟ್ಟಣ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಗ್ರಾಮಸ್ಥರು ಇಂದು ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು ಆದರೆ ಸಂಜೆ ವಿಸರ್ಜನಾ ಮೆರವಣಿಗೆಗೆ ತಡೆ ಉಂಟಾಗಿತ್ತು.