
ಕರ್ನಾಟಕದಲ್ಲಿ ನಂದಿನಿ ಹಾಲಿನ ದರವನ್ನು ಲೀಟರ್ಗೆ 10 ರೂ. ಹೆಚ್ಚಿಸುವಂತೆ ಒಕ್ಕೂಟ ಆಗ್ರಹಿಸಿರುವ ಚರ್ಚೆಗಳ ನಡುವೆಯೇ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ರಾಜ್ಯಾದ್ಯಂತ ಹಾಲಿನ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಮುಂದಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಾಲು, ಹಾಲಿನ ಪೌಡರ್ ಹಾಗೂ ಪನ್ನೀರ್ನಂತಹ ಉತ್ಪನ್ನಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗುತ್ತಿದ್ದು, ಅಂಗನವಾಡಿಗಳಿಗೆ ಸರಬರಾಜಾಗುವ ಪದಾರ್ಥಗಳ ಮೇಲೂ ನಿಗಾ ಇಡಲಾಗಿದೆ.
ಹಾಲಿನಲ್ಲಿ ಕಲಬೆರಕೆ ಹಾಗೂ ಗುಣಮಟ್ಟದ ಕುರಿತು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ 23 ವಿಶೇಷ ತಂಡಗಳನ್ನು ರಚಿಸಿ ಡೇರಿಗಳು ಹಾಗೂ ಮಹಾರಾಷ್ಟ್ರದಿಂದ ಬರುತ್ತಿರುವ ಹಾಲಿನ ತಪಾಸಣೆ ಕೈಗೊಳ್ಳಲಾಗಿದೆ.