
ಕರ್ನಾಟಕದಲ್ಲಿ ರಕ್ತದ ಕೊರತೆ ನೀಗಿಸಲು ಬೆಂಗಳೂರು, ಮಂಗಳೂರು, ಬಳ್ಳಾರಿ ಮತ್ತು ಹುಬ್ಬಳ್ಳಿಯಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ರಕ್ತ ನಿಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ರಕ್ತ ನೀಡಲಾಗುತ್ತಿದ್ದು, ಶೀಘ್ರದಲ್ಲೇ ಎಪಿಎಲ್ ಕಾರ್ಡುದಾರರಿಗೂ ಈ ಸೌಲಭ್ಯ ವಿಸ್ತರಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಪೂರ್ತಿ ರಕ್ತಕ್ಕೆ 1550 ರೂಪಾಯಿ ಹಾಗೂ ಪ್ಲೇಟ್ಲೆಟ್ ಮತ್ತು ಪ್ಲಾಸ್ಮಾಕ್ಕೆ 400 ರೂಪಾಯಿ ಶುಲ್ಕವನ್ನು ಸರ್ಕಾರ ನಿಗದಿಪಡಿಸಿದೆ.