
ಬಿಹಾರದ ಪೂರ್ಣಿಯಾ ಕ್ಷೇತ್ರದ ಸಂಸದ ಪಪ್ಪು ಯಾದವ್ ಅವರ ದೆಹಲಿ ನಿವಾಸದಲ್ಲಿ ಮಾಧ್ಯಮಗೋಷ್ಠಿ ನಡೆಯುತ್ತಿದ್ದಾಗ ಸುಮಿತ್ ಎಂಬಾತ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.
ದಾಳಿಕೋರ ಸುಮಿತ್ ಉತ್ತರ ಪ್ರದೇಶದ ಬುಲಂದ್‌ಶಹರ್ ಮೂಲದವನಾಗಿದ್ದು, ಆತನ ಸಹಚರ ಹ್ಯಾಪಿ ಎಂಬಾತನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಮಮಂದಿರ ದೇಣಿಗೆ ಕಳ್ಳತನದ ಬಗ್ಗೆ ಪ್ರಶ್ನಿಸಿದ್ದಕ್ಕೆ ಈ ಕೊಲೆ ಯತ್ನ ನಡೆದಿದೆ ಎಂದು ಆರೋಪಿಸಿರುವ ಸಂಸದರು, ತಮಗೆ ಸೂಕ್ತ ಭದ್ರತೆ ನೀಡುತ್ತಿಲ್ಲವೆಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.