Health & Environment
ಉತ್ತರಾಖಂಡ್ ಹೆಲಿಕಾಪ್ಟರ್ ದುರಂತ: ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಮೃತದೇಹ ಅಂತ್ಯದರ್ಶನ

ಉತ್ತರಾಖಂಡ್ ಹೆಲಿಕಾಪ್ಟರ್ ದುರಂತ: ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಮೃತದೇಹ ಅಂತ್ಯದರ್ಶನ

tv9kannada1h
THE BRIEF
1

ಉತ್ತರಾಖಂಡ್‌ನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅವರ ಪಾರ್ಥಿವ ಶರೀರವನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮಕ್ಕೆ ತರಲಾಗಿದೆ.

2

ಕುಟುಂಬದ ಜಮೀನಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತದೇಹದ ಮುಂದೆ ಅರುಣ್ ಅವರ ಪತ್ನಿ ಹಾಗೂ ಮಗಳು ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯ ಸ್ಥಳದಲ್ಲಿದ್ದವರ ಕಣ್ಣೀರು ತರಿಸಿದೆ.

3

ಗ್ರಾಮಸ್ಥರು, ಪೊಲೀಸ್ ಅಧಿಕಾರಿಗಳು ಸೇರಿದಂತೆ ನೂರಾರು ಜನರು ಅಗಲಿದ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.