
ಉತ್ತರಾಖಂಡ್ನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ಅವರ ಪಾರ್ಥಿವ ಶರೀರವನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮಕ್ಕೆ ತರಲಾಗಿದೆ.
ಕುಟುಂಬದ ಜಮೀನಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತದೇಹದ ಮುಂದೆ ಅರುಣ್ ಅವರ ಪತ್ನಿ ಹಾಗೂ ಮಗಳು ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯ ಸ್ಥಳದಲ್ಲಿದ್ದವರ ಕಣ್ಣೀರು ತರಿಸಿದೆ.
ಗ್ರಾಮಸ್ಥರು, ಪೊಲೀಸ್ ಅಧಿಕಾರಿಗಳು ಸೇರಿದಂತೆ ನೂರಾರು ಜನರು ಅಗಲಿದ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.