
ಸಿಂಧೂ ಜಲ ಒಪ್ಪಂದದ ಮೂಲಕ ಭಾರತದ ರಕ್ತವನ್ನು ಹೀರಲಾಗಿದೆ ಎಂದು ಆರೋಪಿಸಿರುವ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ, ಒಪ್ಪಂದವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಪಂಜಾಬ್ ಮೂಲಕ ಹರಿಯುವ 6 ನದಿಗಳಲ್ಲಿ 3 ನದಿಗಳನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಿದ್ದರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ನೀರಾವರಿ ಮತ್ತು ವಿದ್ಯುತ್ ಯೋಜನೆಗಳಿಗೆ ತೊಂದರೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕೆಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿರುವ ಒಮರ್ ಅಬ್ದುಲ್ಲಾ, ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.