
ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಲು ಮತ್ತು ರೌಡಿಗಳ ಚಟುವಟಿಕೆ ನಿಯಂತ್ರಿಸಲು ಸಮರ್ಥ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಪ್ರತ್ಯೇಕ ರೌಡಿ ಸ್ಕ್ವಾಡ್ ರಚಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಎತ್ತರದ ಕಟ್ಟಡಗಳಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಎನ್‌ಎಸ್‌ಜಿ ತರಬೇತಿ ಪಡೆಯುವ ಸಿಬ್ಬಂದಿಗೆ ಶೇ. 50ರಷ್ಟು ಹೆಚ್ಚುವರಿ ಮೂಲ ವೇತನ ನೀಡಲಾಗುವುದು ಎಂದು ಸರ್ಕಾರ ಘೋಷಿಸಿದೆ.
ತುರ್ತು ಸಂದರ್ಭಗಳಲ್ಲಿ ಹೆಲಿಕಾಪ್ಟರ್ ಲಭ್ಯತೆಗಾಗಿ ಭಾರತೀಯ ವಾಯುಪಡೆ ಮತ್ತು ಸೇನೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಹಾಗೂ ಕಟ್ಟಡಗಳಲ್ಲಿ ಅಗ್ನಿಶಾಮಕ ವ್ಯವಸ್ಥೆ ಕಡ್ಡಾಯಗೊಳಿಸಲು ಸೂಚಿಸಲಾಗಿದೆ.