
ಜೂನ್ 1ರಿಂದ ಸೆಪ್ಟೆಂಬರ್ 30ರವರೆಗಿನ 122 ದಿನಗಳ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
ಈ ಅವಧಿಯಲ್ಲಿ 79 ದಿನಗಳು ಒಣ ಹವಾಮಾನವಿದ್ದು, ಕೇವಲ 12 ದಿನಗಳಲ್ಲಿ ಮಾತ್ರ ಸಾಮಾನ್ಯಕ್ಕಿಂತ ಅಧಿಕ ಮಳೆ ಬಿದ್ದಿದೆ.
ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಬೆಳೆ ನಷ್ಟದ ಪ್ರಮಾಣವು 46,323 ಕೋಟಿ ರೂಪಾಯಿ ತಲುಪಿದೆ ಎಂದು ವರದಿಯಾಗಿದೆ.