
ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಸರಕುಗಳ ಮೇಲೆ ಶೇ 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಸಂಸತ್ತು ಗುರುವಾರ ಅಂಗೀಕಾರ ನೀಡಿದೆ.
ಈ ಮಸೂದೆಯು ರಷ್ಯಾದಿಂದ ತೈಲ ಹಾಗೂ ಅನಿಲ ಖರೀದಿಸುವ ಭಾರತ ಮತ್ತು ಚೀನಾದಂತಹ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಭಾರಿ ಸುಂಕ ವಿಧಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಧಿಕಾರ ನೀಡುತ್ತದೆ.
ಪ್ರತಿನಿಧಿಗಳ ಸಭೆಯಲ್ಲಿ 262-159 ಮತಗಳಿಂದ ಅಂಗೀಕಾರಗೊಂಡಿರುವ ಈ ಮಸೂದೆಗೆ ಅಧ್ಯಕ್ಷರ ಸಹಿ ಬಿದ್ದ ಕೂಡಲೇ ಕಾಯ್ದೆಯಾಗಿ ಜಾರಿಗೆ ಬರಲಿದೆ.