
ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಜನ್ಮದಿನಾಚರಣೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜೀವ್ ಗಾಂಧಿ ಹತ್ಯೆಯಾಗದಿದ್ದರೆ ತಾನು ಲೋಕಸಭಾ ಸದಸ್ಯನಾಗಿರುತ್ತಿದ್ದೆ ಎಂದು ತಿಳಿಸಿದ್ದಾರೆ.
ರಾಜೀವ್ ಗಾಂಧಿ ಅವರು 18 ವರ್ಷದ ಯುವಕರಿಗೆ ಮತದಾನದ ಹಕ್ಕು ಮತ್ತು ಮಹಿಳೆಯರಿಗೆ 33% ಮೀಸಲಾತಿ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಸ್ಮರಿಸಿದರು.
ದೇವರಾಜ ಅರಸು ಅವರು ಭೂಸುಧಾರಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಧೀಮಂತ ನಾಯಕ ಎಂದು ಬಣ್ಣಿಸಿದ ಸಿದ್ದರಾಮಯ್ಯ, ಬಿಜೆಪಿಗರು ಸಾಮಾಜಿಕ ನ್ಯಾಯದ ವಿರೋಧಿಗಳು ಎಂದು ಟೀಕಿಸಿದರು.