
ಗುಜರಾತ್ ಮೂಲದ ವ್ಯಕ್ತಿಯೊಬ್ಬರು ಕೌಟುಂಬಿಕ ವಿವಾದ ಹಾಗೂ ಮಾನಸಿಕ ಖಿನ್ನತೆಯಿಂದ ನೊಂದು 1,700 ಅಡಿ ಆಳದ ಕಣಿವೆಗೆ ಬಿದ್ದು ದುರ್ಮರಣ ಹೊಂದಿದ್ದಾರೆ.
ಪ್ರಾಣ ಕಳೆದುಕೊಳ್ಳುವ ಮುನ್ನ ಅವರು ವೈವಾಹಿಕ ಜೀವನದ ಸಮಸ್ಯೆಗಳು ಹಾಗೂ ಕಿರುಕುಳದ ಕುರಿತು 13 ನಿಮಿಷಗಳ ವೀಡಿಯೊವನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ ಅಪ್ಲೋಡ್ ಮಾಡಿದ್ದರು.
ರಕ್ಷಣಾ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದು, ಪೊಲೀಸರು ವೀಡಿಯೊ ಹಾಗೂ ಕುಟುಂಬಸ್ಥರ ಹೇಳಿಕೆ ಆಧರಿಸಿ ತನಿಖೆ ಮುಂದುವರಿಸಿದ್ದಾರೆ.