
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣಾ ಪಡೆ ಮತ್ತು ಭಾರತೀಯ ಸೇನೆಯ ಜಂಟಿ ತಂಡ ನಡೆಸಿದ ಈ ಕಾರ್ಯಾಚರಣೆಯಲ್ಲಿ ಎಕೆ ಸರಣಿಯ ರೈಫಲ್‌ಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹತರಾದ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ಪರಿಶೀಲನೆ ಮುಂದುವರಿದಿದ್ದು, ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.