
ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದಲ್ಲಿ ಮೆಲಿಸ್ಸಾ ಪಾತ್ರದಲ್ಲಿ ನಟಿಸುತ್ತಿರುವ ರುಕ್ಮಿಣಿ ವಸಂತ್ ಅವರು ಈ ಚಿತ್ರಕ್ಕಾಗಿ 3 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು ಆಗಸ್ಟ್ 26 ರಂದು ಜಗತ್ತಿನಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದ್ದು, ಟ್ರೇಲರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಯಶಸ್ಸಿನ ನಂತರ ರುಕ್ಮಿಣಿ ಅವರು ಜೂನಿಯರ್ ಎನ್ಟಿಆರ್ ಅವರ 'ಡ್ರ್ಯಾಗನ್' ಸಿನಿಮಾದಲ್ಲೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.