
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದ ಹಿನ್ನೆಲೆಯಲ್ಲಿ ಬ್ಯಾರಕ್ ಬದಲಾವಣೆಗೆ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿದೆ.
ನಟ ದರ್ಶನ್ ಅವರು ವಿಡಿಯೋ ಕಾನ್ಫರೆನ್ಸ್ನಲ್ಲಿ ತಾಂತ್ರಿಕ ಅಡಚಣೆಗಳಾಗುತ್ತಿರುವುದರಿಂದ, ವಿಚಾರಣೆಗೆ ಖುದ್ದು ಹಾಜರಾಗಲು ಅನುಮತಿ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಕೀಲರೊಂದಿಗೆ ನೇರ ಸಂವಹನ ನಡೆಸಲು ಮತ್ತು ಸಾಕ್ಷ್ಯ ವಿಚಾರಣೆಯನ್ನು ಸಮಕ್ಷಮದಲ್ಲಿ ಆಲಿಸಲು ತಮಗೆ ಹಕ್ಕಿದೆ ಎಂದು ದರ್ಶನ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.