
ಚಂಡಮಾರುತ ಪ್ರಸರಣ ಮತ್ತು ಬಂಗಾಳಕೊಲ್ಲಿ ಹಾಗೂ ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 18ರವರೆಗೆ ದಕ್ಷಿಣ ಭಾರತದ ಕೆಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.
ಕರಾವಳಿ ಆಂಧ್ರಪ್ರದೇಶ ಹಾಗೂ ಯಾಣಂನಲ್ಲಿ ಮೂರು ದಿನಗಳವರೆಗೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.