
ಬೆಂಗಳೂರಿನ ಹೆಬ್ಬಾಳದಲ್ಲಿ 2.3 ಕಿ.ಮೀ ಉದ್ದದ ಅವಳಿ ಭೂಗತ ಸುರಂಗ ರಸ್ತೆ ನಿರ್ಮಾಣಕ್ಕಾಗಿ 1,128 ಮರಗಳನ್ನು ಕಡಿಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರಸ್ತಾವನೆ ಮುಂದಿಟ್ಟಿದೆ.
ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಪರಿಸರ ಪ್ರಿಯರು ಆರಂಭಿಸಿರುವ ಆನ್‌ಲೈನ್ ಅಭಿಯಾನಕ್ಕೆ ಈಗಾಗಲೇ 20,000ಕ್ಕೂ ಹೆಚ್ಚು ಸಹಿಗಳು ಲಭಿಸಿವೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಸುಮಾರು ₹1,130 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಈ ಮಾರ್ಗವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಂಪರ್ಕ ಕಲ್ಪಿಸುತ್ತದೆ.