
ನವೆಂಬರ್ 4 ಮತ್ತು 5ರಂದು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆಯನ್ನು ನೀಡಲಾಗಿದೆ.
ಕರಾವಳಿ ಕರ್ನಾಟಕದಲ್ಲೂ ನವೆಂಬರ್ 5ರವರೆಗೆ ಗುಡುಗು ಹಾಗೂ ಮಿಂಚಿನ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.