
ಭಾರತೀಯ ಹವಾಮಾನ ಇಲಾಖೆಯು ಆಗಸ್ಟ್ 15ರವರೆಗೆ ದೇಶದ ವಿವಿಧ ರಾಜ್ಯಗಳಲ್ಲಿ ಸಾಧಾರಣದಿಂದ ಅತೀ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಆಗಸ್ಟ್ 10ರಿಂದ 12ರವರೆಗೆ ಹಿಮಾಚಲ ಪ್ರದೇಶ, ಅಸ್ಸಾಂ, ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ನಂತರ ತೀವ್ರತೆ ಹೆಚ್ಚಲಿದೆ.
ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡಿನ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.