
ನಗರ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು (ಯುಡಿಎಂಎ) ಸ್ಥಾಪಿಸಿದ ದೇಶದ ಮೊದಲ ಮತ್ತು ಏಕೈಕ ರಾಜ್ಯ ಕರ್ನಾಟಕ ಎಂದು ಸಂಸದೀಯ ಸ್ಥಾಯಿ ಸಮಿತಿ ವರದಿ ತಿಳಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗಾಗಿ (ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಕರ್ನಾಟಕವು ಯುಡಿಎಂಎ ರಚಿಸಿದ್ದು, ಇತರ ರಾಜ್ಯಗಳಿಗೂ ಇದನ್ನು ಅನುಸರಿಸಲು ಗೃಹ ಸಚಿವಾಲಯ ಸೂಚಿಸಿದೆ.
ಏಪ್ರಿಲ್ 2025ರಿಂದ ಜಾರಿಗೆ ಬಂದ ವಿಪತ್ತು ನಿರ್ವಹಣೆ (ತಿದ್ದುಪಡಿ) ಕಾಯ್ದೆಯಡಿ, ಎಲ್ಲಾ ರಾಜ್ಯಗಳು ತಮ್ಮ ರಾಜಧಾನಿ ಮತ್ತು ನಗರ ಪಾಲಿಕೆಗಳಲ್ಲಿ ಯುಡಿಎಂಎ ಸ್ಥಾಪಿಸುವುದು ಕಡ್ಡಾಯವಾಗಿದೆ.