
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಹುಲ್ ಗಾಂಧಿ ಪಾಕಿಸ್ತಾನದ ಹಿತಾಸಕ್ತಿಗಳನ್ನು ಬೆಂಬಲಿಸುವವರಂತೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಮಾಳವೀಯ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಪ್ರಕರಣ ರದ್ದುಗೊಳಿಸಿದೆ.