
ಕೆಂಗೇರಿ ಸಮೀಪದ ಅಂಚೆಪಾಳ್ಯದಲ್ಲಿ ಸೋಮವಾರ ಮುಂಜಾನೆ ವಾಕಿಂಗ್ಗೆ ತೆರಳಿದ್ದ ನಾಗರಾಜ್ ಎಂಬುವವರ ಮೇಲೆ ಆನೆ ದಾಳಿ ನಡೆಸಿದ ಪರಿಣಾಮ ಅವರು ಮೃತಪಟ್ಟಿದ್ದಾರೆ.
ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಸ್ಥಳೀಯರು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಆನೆಯನ್ನು ಸೆರೆಹಿಡಿಯಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.