
ಕೊಚ್ಚಿ ಮಿನರಲ್ಸ್ ಆ್ಯಂಡ್ ರೂಟೈಲ್ ಲಿಮಿಟೆಡ್ (CMRL) ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಗೆ ED ಸಮನ್ಸ್ ಜಾರಿ ಮಾಡಿದೆ.
ಅಕ್ಟೋಬರ್ 23ರಂದು ಕೊಚ್ಚಿಯಲ್ಲಿರುವ ED ಕಚೇರಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದ್ದು, ಪ್ರಕರಣದಲ್ಲಿ ತಮ್ಮ ತಪ್ಪಿಲ್ಲ ಎಂದು ಕಮ್ಯುನಿಸ್ಟ್ ಪಕ್ಷ ಸಮರ್ಥಿಸಿಕೊಂಡಿದೆ.
ವಿಜಯನ್, ಅವರ ಪುತ್ರಿ ವೀಣಾ ಹಾಗೂ ಅಳಿಯ ಮೊಹಮ್ಮದ್ ರಿಯಾಸ್ ವಿರುದ್ಧ FIR ದಾಖಲಿಸಲು ಕೇರಳ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಿಜಯನ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.