
ಕಾರವಾರದ ಕದಂಬ ನೌಕಾನೆಲೆಗಾಗಿ ಭೂಮಿ ಕಳೆದುಕೊಂಡ ಅಂಕೋಲಾ ತಾಲೂಕಿನ ಹಟ್ಟಿಕೇರಿ ಪುನರ್ವಸತಿ ಕಾಲೋನಿಯ 400ಕ್ಕೂ ಹೆಚ್ಚು ಕುಟುಂಬಗಳು ಮೂರು ದಶಕಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿವೆ.
ಕಾಲೋನಿಯಲ್ಲಿ ರಸ್ತೆ ಮತ್ತು ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸ್ಮಶಾನದಲ್ಲಿ ಸೂಕ್ತ ಮೇಲ್ಚಾವಣಿ ಇಲ್ಲದ ಕಾರಣ ಮಳೆಗಾಲದಲ್ಲಿ ಅಂತ್ಯಸಂಸ್ಕಾರ ನಡೆಸಲು ನಿವಾಸಿಗಳು ಪರದಾಡುವಂತಾಗಿದೆ.
ಮೃತದೇಹ ಸುಡುವ ಜಾಗದಲ್ಲಿ ತಗಡಿನ ಶೀಟ್ ಕೂಡ ಇಲ್ಲದಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದ್ದು, ಕೂಡಲೇ ಅಧಿಕಾರಿಗಳು ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ನಿವಾಸಿಗಳು ಆಗ್ರಹಿಸಿದ್ದಾರೆ.