
ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28-29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19-20 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗುವ ನಿರೀಕ್ಷೆಯಿದೆ.