
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯವು ಅನಿವಾರ್ಯ ಕಾರಣಗಳಿಂದ ಸೆಪ್ಟೆಂಬರ್ 12ರಂದು ನಡೆಯಬೇಕಿದ್ದ 34ನೇ ಘಟಿಕೋತ್ಸವವನ್ನು ರದ್ದುಗೊಳಿಸಿದೆ.
ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಮತ್ತು ಸಿಜೆಐ ಸೂರ್ಯಕಾಂತ್ ಭಾಗವಹಿಸುವುದನ್ನು ವಿರೋಧಿಸಿ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.
ಪದವಿ ಪಡೆಯಲಿರುವ ವಿದ್ಯಾರ್ಥಿಗಳು ತಮ್ಮ ಪ್ರಮಾಣಪತ್ರಗಳನ್ನು ಕೊರಿಯರ್ ಮೂಲಕ ಅಥವಾ ಕ್ಯಾಂಪಸ್‌ಗೆ ಬಂದು ಪಡೆದುಕೊಳ್ಳಲು ವಿಶ್ವವಿದ್ಯಾಲಯ ಅವಕಾಶ ನೀಡಿದೆ.