Sports
ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯ: ವಿಶ್ವ ದಾಖಲೆ ಬರೆದ ಅರ್ಷದೀಪ್ ಸಿಂಗ್

ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯ: ವಿಶ್ವ ದಾಖಲೆ ಬರೆದ ಅರ್ಷದೀಪ್ ಸಿಂಗ್

prajavani2h
THE BRIEF
1

ನ್ಯೂಜಿಲೆಂಡ್ ವಿರುದ್ಧ ಆಕ್ಲೆಂಡ್‌ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ನಾಲ್ಕು ಓವರ್‌ಗಳಲ್ಲಿ 38 ನೀಡಿ 1 ವಿಕೆಟ್ ಪಡೆದ ಭಾರತದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

2

ಪಂದ್ಯದ ಕೊನೆಯ ಎಸೆತದಲ್ಲಿ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಅವರನ್ನು ಔಟ್ ಮಾಡುವ ಮೂಲಕ, ಟೆಸ್ಟ್ ಕ್ರಿಕೆಟ್ ಆಡುವ ದೇಶಗಳ ಪೈಕಿ ಕ್ಯಾಲೆಂಡರ್ ವರ್ಷವೊಂದರಲ್ಲಿ 40 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

3

ಅಲ್ಲದೆ, ಭಾರತ ಕ್ರಿಕೆಟ್ ತಂಡದ ಪರ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.