
ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಬಾಲಿವುಡ್ ನಟ ಅಕ್ಷಯ್ ಓಬೆರಾಯ್ ಭಾಗವಹಿಸಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.
ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಕಾರ್ಯವೈಖರಿ ಮತ್ತು ಯಶ್ ಅವರ ನಟನಾ ಶಕ್ತಿಯಿಂದ ತಾವು ಸಾಕಷ್ಟು ಕಲಿತಿದ್ದೇನೆ ಎಂದು ಅಕ್ಷಯ್ ಓಬೆರಾಯ್ ತಿಳಿಸಿದ್ದಾರೆ.
ಇಂತಹ ದೊಡ್ಡ ತಾರಾಗಣವಿರುವ ಪ್ರಾಜೆಕ್ಟ್‌ನ ಭಾಗವಾಗಿರುವುದು ತಮ್ಮ ವೃತ್ತಿಜೀವನದ ಅತ್ಯಂತ ಸ್ಮರಣೀಯ ಅನುಭವಗಳಲ್ಲಿ ಒಂದು ಎಂದು ಅವರು ಹೇಳಿದ್ದಾರೆ.