
ಡಿಆರ್ಡಿಒ ಅಭಿವೃದ್ಧಿಪಡಿಸಿದ ಸ್ವದೇಶಿ ನಿರ್ಮಿತ 'ಪ್ರಳಯ್' ಕ್ವಾಸಿ-ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಒಡಿಶಾ ಕರಾವಳಿಯಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.
ಈ ಕ್ಷಿಪಣಿಯು 150 ರಿಂದ 500 ಕಿ.ಮೀ ವರೆಗಿನ ದಾಳಿ ವ್ಯಾಪ್ತಿಯನ್ನು ಹೊಂದಿದ್ದು, ಗಾಳಿಯಲ್ಲಿ ತನ್ನ ಪಥವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಜ್ಞಾನಿಗಳನ್ನು ಅಭಿನಂದಿಸಿದ್ದು, ಇದು ಭಾರತದ ರಕ್ಷಣಾ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದಾರೆ.