
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ನವೆಂಬರ್ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಹಾಲು, ಮೊಸರು, ತುಪ್ಪ ಮತ್ತು ಬಸ್ ಪ್ರಯಾಣ ದರಗಳನ್ನು ಏರಿಕೆ ಮಾಡಿರುವ ಸರ್ಕಾರದ ಕ್ರಮವನ್ನು ಅವರು ತೀವ್ರವಾಗಿ ಟೀಕಿಸಿದ್ದಾರೆ.
ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟದಲ್ಲಿವೆ ಎಂದು ಆರೋಪಿಸಿರುವ ಅವರು, ರೈತರಿಗೆ ನೀಡುವ ಪ್ರೋತ್ಸಾಹಧನದ ಹೊಣೆಯನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.