
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಮೊದಲ ಸುತ್ತಿನಲ್ಲಿ ಕನ್ನಡಿಗ ಆಯುಷ್ ಶೆಟ್ಟಿ ಅವರು ವಿಶ್ವದ ಅಗ್ರಮಾನ್ಯ ಆಟಗಾರ ಶಿ ಯೂ ಕೀ ಅವರನ್ನು 21-14, 13-21, 21-19 ಅಂತರದಲ್ಲಿ ಮಣಿಸಿದ್ದಾರೆ.
ಮಹಿಳಾ ಸಿಂಗಲ್ಸ್‌ನಲ್ಲಿ ಪಿ.ವಿ. ಸಿಂಧು ಅವರು ಐರ್ಲೆಂಡ್‌ನ ಸೋಫಿಯಾ ನೋಬಲ್ ಅವರನ್ನು 21-7, 21-11 ಅಂತರದಿಂದ ಸೋಲಿಸಿ ಎರಡನೇ ಸುತ್ತಿಗೆ ಸುಲಭವಾಗಿ ಪ್ರವೇಶ ಪಡೆದಿದ್ದಾರೆ.
ಮಹಿಳಾ ಡಬಲ್ಸ್‌ನಲ್ಲಿ ಟ್ರಿಸಾ ಜೋಳಿ-ಗಾಯತ್ರಿ ಗೋಪಿಚಂದ್ ಜೋಡಿ 21-9, 21-13 ಅಂತರದಿಂದ ಜಯಗಳಿಸಿದ್ದು, ಪುರುಷರ ಡಬಲ್ಸ್‌ನಲ್ಲಿ ಹರಿಹರನ್-ಅರ್ಜುನ್ ಜೋಡಿ ಮುಂದಿದೆ.