
ದೀಪಾವಳಿ ಹಬ್ಬದ ಬಳಿಕ ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರಗೊಳ್ಳುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಚರ್ಚೆ ನಡೆದಿದೆ.
ವಕೀಲರಿಗೆ ಹೈಬ್ರಿಡ್ ವಿಚಾರಣೆ ಮೂಲಕ ಮನೆಯಿಂದಲೇ ಭಾಗವಹಿಸಲು ಅವಕಾಶವಿದ್ದರೂ, ನ್ಯಾಯಮೂರ್ತಿಗಳು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕಾಗುತ್ತದೆ ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ತಿಳಿಸಿದ್ದಾರೆ.
ಚಳಿಗಾಲದಲ್ಲಿ ವಾಹನಗಳ ಹೊಗೆ, ಕೈಗಾರಿಕಾ ಮಾಲಿನ್ಯ ಹಾಗೂ ಕೃಷಿ ತ್ಯಾಜ್ಯ ಸುಡುವುದರಿಂದ ದೆಹಲಿಯಲ್ಲಿ ವಾಯು ಗುಣಮಟ್ಟವು ಗಂಭೀರವಾಗಿ ಕುಸಿಯುತ್ತದೆ.