
ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 29ರಿಂದ ಸೆಪ್ಟೆಂಬರ್ ಮೊದಲ ವಾರದವರೆಗೆ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಮೋಡ ಕವಿದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.