
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಚಂಡಮಾರುತ ಪ್ರಸರಣದಿಂದಾಗಿ ಕರ್ನಾಟಕ ಸೇರಿದಂತೆ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಸೆಪ್ಟೆಂಬರ್ 23-24ರ ರಾತ್ರಿ ಆಳವಾದ ವಾಯುಭಾರ ಕುಸಿತವು ಉತ್ತರ ಆಂಧ್ರಪ್ರದೇಶ-ದಕ್ಷಿಣ ಒಡಿಶಾ ಕರಾವಳಿಗಳನ್ನು ದಾಟುವ ಸಾಧ್ಯತೆಯಿದೆ.
ಸೆಪ್ಟೆಂಬರ್ 22 ರಿಂದ 25 ರವರೆಗೆ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಹಾಗೂ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.