
ಉದ್ಯಾನವನಗಳ ಶೇ 5ರಷ್ಟು ಭೂಮಿಯನ್ನು ಪರಭಾರೆ ಮಾಡಲು ಅವಕಾಶ ನೀಡುವ ಕರ್ನಾಟಕ ಉದ್ಯಾನವನಗಳ ವಿಧೇಯಕವನ್ನು ವಾಪಸ್ ಕಳುಹಿಸುವಂತೆ ಸಂಸದ ತೇಜಸ್ವಿ ಸೂರ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಈ ವಿಧೇಯಕವು ಸಾರ್ವಜನಿಕ ಉದ್ಯಾನವನಗಳ ಮೂಲ ಸ್ವರೂಪಕ್ಕೆ ಧಕ್ಕೆ ತರಲಿದೆ ಎಂದು ತೇಜಸ್ವಿ ಸೂರ್ಯ ಅವರು ತಮ್ಮ ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಈ ನಿರ್ಧಾರವನ್ನು ರಾಜ್ಯಪಾಲರು ಒಪ್ಪಬಾರದು ಎಂದು ಕೋರಿರುವ ಅವರು, ವಿಧೇಯಕವನ್ನು ಮರುಪರಿಶೀಲನೆಗಾಗಿ ಸರ್ಕಾರಕ್ಕೆ ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ.