
ಹೆಚ್ಚಿನ ಸಕ್ಕರೆ, ಉಪ್ಪು ಮತ್ತು ಕೊಬ್ಬಿನಂಶವಿರುವ ಸಂಸ್ಕರಿಸಿದ ಆಹಾರ ಪದಾರ್ಥಗಳ ಪ್ಯಾಕೆಟ್ಗಳ ಮೇಲೆ ಎಚ್ಚರಿಕೆ ಲೇಬಲ್ಗಳನ್ನು ಕಡ್ಡಾಯವಾಗಿ ಹಾಕುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
FSSAI ಪ್ರಸ್ತಾವನೆಯಂತೆ, ನಿಗದಿತ ಮಿತಿ ಮೀರಿದ ಆಹಾರ ಉತ್ಪನ್ನಗಳ ಮುಂಭಾಗದಲ್ಲಿ ಕೆಂಪು ಷಡ್ಭುಜಾಕೃತಿಯ ಎಚ್ಚರಿಕೆ ಲೇಬಲ್ ಅಳವಡಿಸುವುದು ಕಡ್ಡಾಯವಾಗಲಿದೆ.
ಬೊಜ್ಜು, ಮಧುಮೇಹ ಮತ್ತು ಹೃದಯಸಂಬಂಧಿ ಕಾಯಿಲೆಗಳನ್ನು ತಡೆಯುವ ನಿಟ್ಟಿನಲ್ಲಿ ಗ್ರಾಹಕರಿಗೆ ಸ್ಪಷ್ಟ ಮಾಹಿತಿ ನೀಡಲು ನ್ಯಾಯಾಲಯ ಈ ಕ್ರಮಕ್ಕೆ ಮುಂದಾಗಿದೆ.