
ಮಹಿಳಾ ಪ್ರೀಮಿಯರ್ ಲೀಗ್ 2027ರ ಮಿನಿ ಹರಾಜಿನಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ತಂಡವು ಕರ್ನಾಟಕದ ಯುವ ಆಟಗಾರ್ತಿ ವೃಂದಾ ದಿನೇಶ್ ಅವರನ್ನು ₹10 ಲಕ್ಷ ಮೂಲ ಬೆಲೆಗೆ ಖರೀದಿಸಿದೆ.
ತವರು ತಂಡವಾದ ಆರ್‌ಸಿಬಿಗೆ ವೃಂದಾ ಆಯ್ಕೆಯಾಗುತ್ತಿದ್ದಂತೆ ಕರ್ನಾಟಕದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಲಗೈ ಟಾಪ್-ಆರ್ಡರ್ ಬ್ಯಾಟ್ಸ್‌ಮನ್ ಹಾಗೂ ಲೆಗ್-ಸ್ಪಿನ್ ಬೌಲರ್ ಆಗಿರುವ ವೃಂದಾ ಈ ಹಿಂದೆ ಯುಪಿ ವಾರಿಯರ್ಸ್ ತಂಡವನ್ನು ಪ್ರತಿನಿಧಿಸಿದ್ದರು.