
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದಲ್ಲಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡವರಲ್ಲಿ 71 ಜನರಿಗೆ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದ್ದು, ಸುಮಾರು 30 ಜನರಿಗೆ ಚಿಕಿತ್ಸೆ ಮುಂದುವರಿದಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.