
ಬೆಂಗಳೂರಿನ ಬನಶಂಕರಿ 6ನೇ ಹಂತದ 2ನೇ ಬ್ಲಾಕ್‌ನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಚಿರತೆ ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಗ್ಗಲೀಪುರ ಅರಣ್ಯ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿಯಲು ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಸುರಕ್ಷತೆಯ ಬಗ್ಗೆ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.