
ಜಿಂದಾಲ್ ಸಮೂಹವು ಮುಂದಿನ 5 ವರ್ಷಗಳಲ್ಲಿ ಕರ್ನಾಟಕದಲ್ಲಿ 1.20 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಕಳೆದ 30 ವರ್ಷಗಳಲ್ಲಿ ಜಿಂದಾಲ್ ಕಂಪನಿಯು ರಾಜ್ಯದಲ್ಲಿ ಈಗಾಗಲೇ 1.30 ಲಕ್ಷ ಕೋಟಿ ರೂ. ಹೂಡಿಕೆ ಮಾಡಿದ್ದು, ಬಳ್ಳಾರಿ ಮತ್ತು ವಿಜಯನಗರದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾರಣವಾಗಿದೆ.
ಬಿಸ್ಲೇರಿ, ರೇಮಂಡ್, ಎಲ್ ಅಂಡ್ ಟಿ ಮತ್ತು ಟಾರ್ಕ್ ಸೆಮಿಕಂಡಕ್ಟರ್ಸ್ ಸೇರಿದಂತೆ 10ಕ್ಕೂ ಹೆಚ್ಚು ಪ್ರಮುಖ ಕಂಪನಿಗಳು ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.