
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೋಲ್ ಕಟ್ಟಬೇಡಿ ಎಂಬ ಹೇಳಿಕೆ ನೀಡಿದ ನಂತರ ನೈಸ್ ರಸ್ತೆಯಲ್ಲಿ ಟೋಲ್ ಪಾವತಿಸಲು ವಾಹನ ಸವಾರರು ಹಿಂದೇಟು ಹಾಕುತ್ತಿದ್ದಾರೆ.
ಟೋಲ್ ಸಿಬ್ಬಂದಿ ಮತ್ತು ವಾಹನ ಸವಾರರ ನಡುವೆ ನಿತ್ಯ ಕಿತ್ತಾಟ ನಡೆಯುತ್ತಿದ್ದು, ಟೋಲ್ ಕಟ್ಟದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ನೈಸ್ ಆಡಳಿತ ಎಚ್ಚರಿಕೆ ನೀಡಿದೆ.
ಹೈಕೋರ್ಟ್ ಟೋಲ್ ಸಂಗ್ರಹ ಕಾನೂನುಬಾಹಿರ ಎಂದು ಯಾವುದೇ ಆದೇಶ ನೀಡಿಲ್ಲ ಎಂದು ನೈಸ್ ಆಡಳಿತ ಸ್ಪಷ್ಟಪಡಿಸಿದ್ದು, ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದೆ.